ಚಾಮರಾಜನಗರ

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (35) ಬಂಧಿತ ವ್ಯಕ್ತಿ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ ವಿಭಾಗದ ಕೊಳ್ಳೇಗಾಲ ವನ್ಯಜೀವಿ ವಲಯದ ವ್ಯಾಪ್ತಿಯ ಗುಂಡಾಲ್ ಜಲಾಶಯದ 1ನೇ ತೂಬಿನ ಹತ್ತಿರ ಗಂಡು ಹುಲಿ ಕಳೇಬರ ಪತ್ತೆಯಾಗಿತ್ತು.

ಈ ಸಂಬಂಧ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡು ಕುಮಾರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹುಲಿ ಸಾವು ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

3 mins ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

52 mins ago

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.…

1 hour ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

2 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

2 hours ago

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

3 hours ago