ಚಾಮರಾಜನಗರ

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ ಜಲಾಶಯದ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಬೇಟೆಗಾರರ ಉರುಳಿಗೆ ಸಿಲುಕಿ ಮೃತಪಟ್ಟಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಬೇಟೆಗಾರರು ಜಲಾಶಯದ ನೀರು ಕುಡಿಯಲು ಬರುವ ಪ್ರಾಣಿಗಳನ್ನು ಸೆರೆ ಹಿಡಿಯಲು ಉರುಳು ಹಾಕಿದ್ದಾರೆ. ಈ ಉರುಳಿಗೆ ಹುಲಿ ಸಿಲುಕಿ ಮೃತಪಟ್ಟಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಡಿಸಿಎಫ್ ಶ್ರೀಪತಿ ವಲಯ ಅರಣ್ಯ ಅಧಿಕಾರಿ ವಾಸು ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಸಮಗ್ರ ಮಾಹಿತಿ ನೀಡುವುದಾಗಿ ಡಿಸಿಎಫ್ ಶ್ರೀಪತಿ ಪತ್ರಿಕೆಗೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

16 mins ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

48 mins ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

2 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

2 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

2 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

3 hours ago