ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿ ಹುಲಿಯೊಂದು ತಾಯಿ ಜೊತೆ ಚಿನ್ನಾಟ ಆಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ.
ಬಂಡೀಪುರದ ಸಫಾರಿ ವಲಯದಲ್ಲಿ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ತಾಯಿ ಹುಲಿ ಜೊತೆ ಮರಿ ಹುಲಿ ಚಿನ್ನಾಟ ಆಡುತ್ತಾ ಮುದ್ದಾಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.