ಹನೂರು : ಐದು ಹುಲಿಗಳ ಸಾವಿಗೆ ಕಾರಣವಾಗಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಮೂವರು ಆರೋಪಿಗಳನ್ನು ಜೂನ್ 28ರ ಶನಿವಾರ ದಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜೂನ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.
ಜೂನ್ 30ರಂದು ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಬೇಕಿರುವುದರಿಂದ ಅರಣ್ಯ ಇಲಾಖೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದ ಹಿನ್ನೆಲೆ ನ್ಯಾಯಾಧಿಶರು ಜುಲೈ 3ರವರೆಗೆ ಕಸ್ಟಡಿಗೆ ನೀಡಿದ್ದರು.
ಆದರೆ ಜೂನ್ 30ರಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್, ಎಸಿಎಫ್, ಆರ್‌ಎಫ್ ಒ ರವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಒಂದು ದಿನ ವಿಚಾರಣೆ ಮಾಡಿ ವಾಪಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಧೀಶರು 3 ದಿನಗಳ ಕಾಲ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲು ಅವಕಾಶ ಮಾಡಿಕೊಟ್ಟರೂ ಅರಣ್ಯ ಇಲಾಖೆ ಅಧಿಕಾರಿಗಳು ಕೇವಲ ಒಂದು ದಿನಕ್ಕೆ ವಿಚಾರಣೆ ಮುಗಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.





