ಚಾಮರಾಜನಗರ

ಹುಲಿಗಳ ಸಾವು ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

ಹನೂರು : ಐದು ಹುಲಿಗಳ ಸಾವಿಗೆ ಕಾರಣವಾಗಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮೂವರು ಆರೋಪಿಗಳನ್ನು ಜೂನ್ 28ರ ಶನಿವಾರ ದಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜೂನ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

ಜೂನ್ 30ರಂದು ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಬೇಕಿರುವುದರಿಂದ ಅರಣ್ಯ ಇಲಾಖೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದ ಹಿನ್ನೆಲೆ ನ್ಯಾಯಾಧಿಶರು ಜುಲೈ 3ರವರೆಗೆ ಕಸ್ಟಡಿಗೆ ನೀಡಿದ್ದರು.

ಆದರೆ ಜೂನ್ 30ರಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್, ಎಸಿಎಫ್, ಆರ್‌ಎಫ್ ಒ ರವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಒಂದು ದಿನ ವಿಚಾರಣೆ ಮಾಡಿ ವಾಪಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಧೀಶರು 3 ದಿನಗಳ ಕಾಲ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲು ಅವಕಾಶ ಮಾಡಿಕೊಟ್ಟರೂ ಅರಣ್ಯ ಇಲಾಖೆ ಅಧಿಕಾರಿಗಳು ಕೇವಲ ಒಂದು ದಿನಕ್ಕೆ ವಿಚಾರಣೆ ಮುಗಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago