ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿಯಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಉರುಳು ಹಾಕಿದವರ ಹಿಂದೆ ಬಿದ್ದಿದ್ದು, ಸತತ ವಿಚಾರಣೆಯಲ್ಲಿ ತೊಡಗಿದೆ. ಬೇರೆ ಪ್ರಾಣಿಗೆ ಹಾಕಿದ್ದ ಉರುಳಿಗೆ ಹುಲಿ ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹುಲಿಯ ಮೃತದೇಹ ಪತ್ತೆಯಾದ ತಕ್ಷಣವೇ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಆದರೆ ಹುಲಿಯ ಕೊರಳಿಗೆ ಸ್ಕೂಟರ್ ಕ್ಲಚ್ ವೈರ್ ಸುತ್ತಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವುದು ಅಧಿಕಾರಿಗಳಿಗೆ ಗೊತ್ತಾಗಿದೆ.
ಜಲಾಶಯಕ್ಕೆ ಹುಲಿ ನೀರು ಕುಡಿಯಲು ಹೋದ ವೇಳೆ ಬದುಕಿತ್ತು. ನೀರಿಗೆ ಬಿದ್ದು ಸಾವನ್ನಪ್ಪಿದೆ ಎಂದು ಕೂಡ ಪಶುವೈದ್ಯರು ತಿಳಿಸಿದ್ದಾರೆ. ನಿರಂತರವಾಗಿ ಉರುಳು ಕತ್ತಿಗೆ ಸುತ್ತಿಕೊಂಡಿದ್ದರಿಂದ ಉಸಿರಾಡಲು ಆಗದೇ ಹುಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…