ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.
ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸುಮಾರು ನಾಲ್ಕರಿಂದ ಐದು ವರ್ಷದ ಹೆಣ್ಣು ಹುಲಿ ಸೆರೆಯಾಗಿದೆ. ಬೋನಿನಲ್ಲಿ ಇರಿಸಿದ್ದ ಕರುವನ್ನು ಹುಲಿ ತಿಂದುಹಾಕಿದೆ.
ಕಳೆದ ಹದಿನೈದು ದಿನಗಳಿಂದ ಈ ಎರಡೂ ಗ್ರಾಮಗಳ ಸುತ್ತಮುತ್ತ ಹುಲಿ ಸಂಚರಿಸುತ್ತಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕುತ್ತಿತ್ತು. ಒಂದು ವಾರದ ಹಿಂದೆ ಅರ್ಜುನ್ ಅವರ ಹಸುವನ್ನೂ ಕೊಂದಿತ್ತು. ಇದರಿಂದ ಆತಂಕಗೊಂಡ ಗ್ರಾಮಸ್ಥರು ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಗ್ರಾಮಸ್ಥರ ಆಗ್ರಹದ ಹಿನ್ನೆಲೆಯಲ್ಲಿ ಇಲಾಖೆ ಬೋನು ಇರಿಸಿತ್ತು.
ಸೆರೆಯಾದ ಹುಲಿಯನ್ನು ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಬೇಕೇ ಅಥವಾ ಬೇರೆಡೆ ಬಿಡಬೇಕೇ ಎಂಬುದರ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಫರ್ ವಲಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…