ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ.
ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ ಹುಲಿಯೊಂದು ಓಡಾಡಿದ್ದು ಹೆಜ್ಜೆ ಗುರುತು ಪತ್ತೆಯಾಗಿದೆ.
ಹುಲಿ ಹೆಜ್ಜೆ ಗುರುತು ಕಂಡ ಸ್ಥಳೀಯರು ಆತಂಕಗೊಂಡಿದ್ದು ರಾತ್ರಿ ವೇಳೆ ಜಮೀನುಗಳಿಗೆ ತೆರಳಲು ರೈತರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಬೇಕು ಎಂದು ಪರಿಸರ ಪ್ರೇಮಿ ಎನ್.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.



