ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಹುಲಿ ದಾಳಿಯ ಭೀತಿಯಿಂದಾಗಿ ಕೃಷಿ ಕಾರ್ಮಿಕರು ಜಮೀನಿಗೆ ಬರಲು ನಿರಾಕರಿಸುತ್ತಿದ್ದಾರೆ. ಇದರಿಂದಾಗಿ ಕೈಗೆ ಬಂದ ಫಸಲನ್ನು ಕೊಯ್ಲು ಮಾಡಲಾಗದೆ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ.
ಆರಂಭದಲ್ಲಿ ಅರಣ್ಯ ಇಲಾಖೆ ಸ್ವಲ್ಪ ಭದ್ರತೆ ಒದಗಿಸಿದರೂ, ಈಗ ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಈ ಭಾಗದಲ್ಲಿ ಹುಲಿ ದಾಳಿಗೆ ಹಲವು ಹಸುಗಳು ಹಾಗೂ ಹತ್ತಾರು ನವಿಲುಗಳು ಬಲಿಯಾಗಿವೆ. ಹುಲಿ ಅಲೆದಾಟದ ದೃಶ್ಯಗಳು ಕಂಡುಬಂದರೂ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ” ಎಂದು ಸ್ಥಳೀಯರು ದೂರಿದ್ದಾರೆ.
ಹುಲಿ ಸೆರೆಗೆ ಅರಣ್ಯ ಇಲಾಖೆ ಕೇವಲ ಕಾಟಾಚಾರಕ್ಕೆ ಬೋನು ಮತ್ತು ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಿದೆ ಎಂಬುದು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.
“ನಾವು ಹುಲಿಯನ್ನು ಕೊಂದರೆ ನಮ್ಮನ್ನು ಜೈಲಿಗೆ ಹಾಕುತ್ತೀರಿ, ಅದೇ ಹುಲಿ ನಮ್ಮನ್ನು ಕೊಂದರೆ ಯಾರನ್ನು ಜೈಲಿಗೆ ಹಾಕುತ್ತೀರಿ?” ಎಂದು ಇಲಾಖೆಯ ಅಧಿಕಾರಿಗಳನ್ನು ರೈತರು ಪ್ರಶ್ನಿಸಿದ್ದಾರೆ.
ಮಹದೇಶ್ವರ ವನ್ಯಧಾಮದಲ್ಲಿ ನಡೆದ ಅಹಿತಕರ ಘಟನೆಗಳು ಇಲ್ಲಿಯೂ ಮರುಕಳಿಸುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…