ಚಾಮರಾಜನಗರ

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ.

ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಹುಲಿ ದಾಳಿಯ ಭೀತಿಯಿಂದಾಗಿ ಕೃಷಿ ಕಾರ್ಮಿಕರು ಜಮೀನಿಗೆ ಬರಲು ನಿರಾಕರಿಸುತ್ತಿದ್ದಾರೆ. ಇದರಿಂದಾಗಿ ಕೈಗೆ ಬಂದ ಫಸಲನ್ನು ಕೊಯ್ಲು ಮಾಡಲಾಗದೆ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ.

ಆರಂಭದಲ್ಲಿ ಅರಣ್ಯ ಇಲಾಖೆ ಸ್ವಲ್ಪ ಭದ್ರತೆ ಒದಗಿಸಿದರೂ, ಈಗ ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಈ ಭಾಗದಲ್ಲಿ ಹುಲಿ ದಾಳಿಗೆ ಹಲವು ಹಸುಗಳು ಹಾಗೂ ಹತ್ತಾರು ನವಿಲುಗಳು ಬಲಿಯಾಗಿವೆ. ಹುಲಿ ಅಲೆದಾಟದ ದೃಶ್ಯಗಳು ಕಂಡುಬಂದರೂ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ” ಎಂದು ಸ್ಥಳೀಯರು ದೂರಿದ್ದಾರೆ.

ಹುಲಿ ಸೆರೆಗೆ ಅರಣ್ಯ ಇಲಾಖೆ ಕೇವಲ ಕಾಟಾಚಾರಕ್ಕೆ ಬೋನು ಮತ್ತು ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಿದೆ ಎಂಬುದು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.

“ನಾವು ಹುಲಿಯನ್ನು ಕೊಂದರೆ ನಮ್ಮನ್ನು ಜೈಲಿಗೆ ಹಾಕುತ್ತೀರಿ, ಅದೇ ಹುಲಿ ನಮ್ಮನ್ನು ಕೊಂದರೆ ಯಾರನ್ನು ಜೈಲಿಗೆ ಹಾಕುತ್ತೀರಿ?” ಎಂದು ಇಲಾಖೆಯ ಅಧಿಕಾರಿಗಳನ್ನು ರೈತರು ಪ್ರಶ್ನಿಸಿದ್ದಾರೆ.

​ಮಹದೇಶ್ವರ ವನ್ಯಧಾಮದಲ್ಲಿ ನಡೆದ ಅಹಿತಕರ ಘಟನೆಗಳು ಇಲ್ಲಿಯೂ ಮರುಕಳಿಸುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

2 mins ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

5 mins ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

8 mins ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

16 mins ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

29 mins ago

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

49 mins ago