Mysore
19
mist

Social Media

ಭಾನುವಾರ, 11 ಜನವರಿ 2026
Light
Dark

ಹುಲಿ ಹತ್ಯೆ ಪ್ರಕರಣ : ಮತ್ತೇ ನಾಲ್ವರ ಬಂಧನ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು ತುಂಡು ಮಾಡಿ ನಾಪತ್ತೆಯಾಗಿದ್ದ ಗೋವಿಂದನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ ನಂತರ ನಾಲ್ವರ ಹೆಸರನ್ನು ತಿಳಿಸಿದ್ದು ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಸಂಜು, ಪ್ರದೀಪ್, ಆನಂದ್ ಹಾಗೂ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾರಾಯಣ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದ ಸಮೀಪದ ಅರಣ್ಯದಲ್ಲಿ ಒಂದು ಹುಲಿಯನ್ನು ಕೊಂದು ಅರ್ಧ ಕಳೆ ಬರವನ್ನು ಮಣ್ಣಿನಲ್ಲಿ ಹುದಗಿಸಿ, ಹುಲಿಯ ತಲೆ ಭುಜ ಮುಂದಿನ ಕಾಲುಗಳು, ಅನತಿ ದೂರದಲ್ಲಿ ಉಳಿದ ಭಾಗಗಳು ದೊರೆತಿತ್ತು.

ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಐದು ಜನರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಇವರು ಕೋರ್ಟಿನಿಂದ ಜಾಮೀನು ಪಡೆದು ಹೊರ ಬಂದಿದ್ದರು ಆದರೆ ಪ್ರಕರಣದ ಪ್ರಮುಖ ಆರೋಪಿ ಗೋವಿಂದ ಮಾತ್ರ ಸಿಕ್ಕಿರಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಈತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಹುಲಿ ಕೊಂದ ಪ್ರಕರಣದಲ್ಲಿ ಇನ್ನೂ ನಾಲ್ವರು ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದ, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ಆರು ಇದರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:
error: Content is protected !!