ಚಾಮರಾಜನಗರ

ಹುಲಿ ಹತ್ಯೆ ಪ್ರಕರಣ : ಓರ್ವ ವ್ಯಕ್ತಿ ವಶಕ್ಕೆ

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ.

ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, ಹುಲಿಯನ್ನು ಕೊಂದು ಮೂರು ಭಾಗಗಳಾಗಿ ತುಂಡರಿಸಿ ಅರಣ್ಯದಲ್ಲೇ ಹುದುಗಿಸಿಟ್ಟಿದ್ದ ಗುಮಾನಿ ಮೇಲೆ ಈತನನ್ನು ವಶಕ್ಕೆ ಪಡೆದಿದ್ದು ಪ್ರತಿಕಾರಕ್ಕೆ ಈತ ಹುಲಿ ಕೊಂದಿದ್ದಾನೆಂದು ಉನ್ನತ ಮೂಲಗಳು ಆಂದೋಲನಕ್ಕೆ ತಿಳಿಸಿವೆ.

ಹುಲಿ ಹತ್ಯೆಯಲ್ಲಿ ಈತನೊಬ್ಬನೇ ಭಾಗಿಯಾದನೇ, ಈತನಿಗೆ ಯಾರದಾರೂ ಕೈ ಜೋಡಿಸಿದರೇ, ಭಾರೀ ಗಾತ್ರದ ಹುಲಿಯನ್ನು ಈತ ಕೊಂದಿದ್ದು ಹೇಗೆ? ಎಂಬುದು ವಿಚಾರಣೆ ಬಳಿಕ ತಿಳಿದುಬರಬೇಕಿದೆ.

ಇದನ್ನೂ ಓದಿ:-ಕಲ್ತುಳಿತ | ವಿಜಯ್‌ ಬಳಸಿದ್ದ ಪ್ರಚಾರದ ಬಸ್‌ ಎಸ್‌ಐಟಿ ವಶಕ್ಕೆ

ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದ ಬಗ್ಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಪ್ರತಿಕ್ರಿಯಿಸಿ, ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕವಷ್ಟೇ ಮಾಹಿತಿ ಬಹಿರಂಗಗೊಳಿಸಲಾಗುವುದು, ಹುಲಿ ಕೊಂದ ಬಗೆ ಬಗ್ಗೆ ಎಫ್ಎಸ್ಎಲ್ ವರದಿ ಕಾಯುತ್ತಿದ್ದೇವೆ ಎಂದು ಹೇಳಿದರು.

ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ
ಅರಣ್ಯ ಸಚಿವ ಈಶ್ವರ್ ಖಂಡ್ರೆ ಹುಲಿ ಹತ್ಯೆ ಕೇಸನ್ನು ಗಂಭೀರವಾಗಿ ಪರಿಗಣಿಸಿ ಪಿಸಿಸಿಎಫ್ ಸ್ಮಿತಾ ನೇತೃತ್ವದಲ್ಲಿ ತನಿಖೆ ನಡೆಸಿ 8 ದಿನಗಳಲ್ಲಿ ವರದಿ ಕೊಡುವಂತೆ ಸೂಚಿಸಿದ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಪಿಸಿಸಿಎಫ್ ಸ್ಮಿತಾ ಬಿಜ್ಜೂರು, ಎಪಿಸಿಸಿಎಫ್ ರಮೇಶ್ ತ್ರಿಪಾಠಿ, ಹುಲಿ ಯೋಜನೆಗಳ ಮೈಸೂರು ವಿಭಾಗದ ನಿರ್ದೇಶಕ ರಮೇಶ್ ಕುಮಾರ್ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಹುಲಿ ಕಳೇಬರ ದೊರೆತ ಸ್ಥಳಗಳನ್ನು ಜಾಲಾಡಿದರು.

ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸಮಗ್ರ ಮಾಹಿತಿ ಪಡೆದ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

10 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

32 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

1 hour ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

1 hour ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

2 hours ago