ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ರಕ್ಷಣೆ ಮಾಡಿ ಅರವಳಿಕೆ ಲಸಿಕೆ ನೀಡಿ, ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದಾರೆ.





