ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹುಲಿಯೊಂದು ಅವರ ಬಳಿ ಬಂದಿದೆ. ಹುಲಿಯನ್ನು ಕಂಡ ಪುಟ್ಟಯ್ಯ ಗಾಬರಿಗೊಂಡು ಸ್ಥಳದಲ್ಲೇ ನಿಂತಿದ್ದಾರೆ. ಕೆಲ ಕ್ಷಣ ರೈತನನ್ನು ನೋಡಿದ ಹುಲಿ ಬಳಿಕ ಯಾವುದೇ ಹಾನಿ ಮಾಡದೆ ಸಮೀಪದ ಕಬ್ಬಿನ ಗದ್ದೆಯೊಳಗೆ ನುಗ್ಗಿದೆ.
ಬಳಿಕ ರೈತ ಪುಟ್ಟಯ್ಯ ಪಕ್ಕದಲ್ಲಿಯೇ ಇದ್ದ ಮರವನ್ನು ಏರಿ ತನ್ನ ಮೊಬೈಲ್‌ನಲ್ಲಿ ಹುಲಿ ಓಡುವ ವಿಡಿಯೋ ಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಹುಲಿ ಹೆಜ್ಜೆ ಎಂದು ಖಚಿತಪಡಿಸಿದ್ದಾರೆ. ಬಳಿಕ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.
ಹುಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಅರಣ್ಯ ಇಲಾಖೆಯ ಅಽಕಾರಿಗಳು ಹುಲಿಯನ್ನು ಸೆರೆಹಿಡಿಯಬೇಕು ಎಂದು ಮುಖಂಡ ಬಾಗಳಿ ರೇವಣ್ಣ ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…