ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ.
ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿದ್ದವು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ.
ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣ ಸಿಗುತ್ತಿವೆ.
ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರವನ್ನು ಅಕ್ಟೋಬರ್.2, 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.
ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಇಂದು ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…