ಚಾಮರಾಜನಗರ

ವಿಷಪ್ರಾಶನದಿಂದ ಹುಲಿಗಳ ಸಾವು : ಸಿಸಿಎಫ್‌ ಹೀರಾಲಾಲ್‌

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್‌ ತಿಳಿಸಿದರು.

ಹುಲಿ ಹಾಗೂ ಅಣತಿ ದೂರದಲ್ಲೇ ಸಿಕ್ಕಿದ್ದ ಹಸುವಿನ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಹುಲಿಗಳ ದೇಹ ಸೇರಿರುವ ವಿಷ ಯಾವುದು, ಪ್ರಮಾಣ ಎಷ್ಟು ಎಂಬ ಮಾಹಿತಿ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಹುಲಿಗಳ ಮರಣೋತ್ತರ ಪರೀಕ್ಷೆಯ ಬಳಿಕ ಮಾಹಿತಿ ನೀಡಿದರು.

ಐದು ಹುಲಿಗಳು ಮೂರು ದಿನಗಳ ಹಿಂದೆಯೇ ಮೃತಪಟ್ಟಿವೆ. ತಾಯಿ ಹುಲಿಗೆ 10 ವರ್ಷ ಹಾಗೂ ಮರಿಗಳಿಗೆ 8 ರಿಂದ 10 ತಿಂಗಳಾಗಿದೆ. ಸದ್ಯ ಘಟನೆ ಬಗ್ಗೆ ತನಿಖೆ ನಡೆಯುತ್ತದೆ, ಹುಲಿ ಬೇಟೆಯಾಡಿದ ಬಳಿಕ ಹಸುವಿನ ಕಳೇಬರಕ್ಕೆ ವಿಷ ಹಾಕಲಾಯಿತೇ ಅಥವಾ ವಿಷಪ್ರಾಶನದ ಹಸುವನ್ನು ಕಾಡಿನೊಳಗೆ ಇರಿಸಲಾಗಿತ್ತೇ ಎಂಬ ಮಾಹಿತಿ ಕಲೆ ಹಾಕುತ್ತಿದೆ. ಇತ್ತ ಮೃತ ಜಾನುವಾರ ಮಾಲೀಕನ ಪತ್ತೆ ಕಾರ್ಯವು ನಡೆಯುತ್ತಿದೆ ಎಂದು ತಿಳಿಸಿದರು.

ಘಟನಾ ಸ್ಥಳಕ್ಕೆ ಖಂಡ್ರೆ ಭೇಟಿ: ಹುಲಿ ಮೃತದೇಹ ಸಿಕ್ಕ ಮೀಣ್ಯಂ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಹಸುವಿನ ಕಳೇಬರಕ್ಕೆ ವಿಷ ಹಾಕಿದ್ದು ಯಾರು ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಘಟನಾ ಸ್ಥಳಕ್ಕೆ ತೆರಳಿದ್ದು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

34 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

1 hour ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago