ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಆಯಾ ಕಟ್ಟಿನ ಸ್ಥಳಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಇದಲ್ಲದೆ ಬೇಸಿಗೆ ರಜೆ ಇರುವುದರಿಂದ ಪೋಷಕರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಮಹದೇಶ್ವರ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:- ಕದನ ವಿರಾಮ ಘೋಷಣೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದ ಕಾಂಗ್ರೆಸ್
ಈ ನಿಟ್ಟಿನಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ.