ಚಾಮರಾಜನಗರ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ಆರ್‌ಟಿಓ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ.
ಘಟನೆಯಲ್ಲಿ ಜಾಸ್ಮೀನ್‌ಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಕ್‌ಗೆ ಟಿಪ್ಪರ್ ಗುದ್ದಿ ಸುಮಾರು 20 ಮೀಟರ್ ದೂರ ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಕಾಲು ಸಂಪೂರ್ಣ ಸಜ್ಜುಗುಜ್ಜಾಗಿದೆ.
ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.