ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ.
ಮೃತರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೊಳ್ಳೇಗಾಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಮೃತರ ಶವಗಳನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಶವಗಳನ್ನು ಹುಟ್ಟೂರಿಗೆ ರವಾನಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.





