ಚಾಮರಾಜನಗರ

ಕೊಳ್ಳೇಗಾಲ| ಟಿಪ್ಪರ್- ಕಾರು ನಡುವೆ ಅಪಘಾತ: ಐವರ ದುರ್ಮರಣ

ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ.

ಮೃತರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಟಿಪ್ಪರ್‌ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೊಳ್ಳೇಗಾಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಮೃತರ ಶವಗಳನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಶವಗಳನ್ನು ಹುಟ್ಟೂರಿಗೆ ರವಾನಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

9 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

13 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

29 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago