ಚಾಮರಾಜನಗರ

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ ನಡೆದಿದೆ.

ಪಟ್ಟಣದ ಹೊರವಲಯದ ಮಲ್ಲಯ್ಯನಪುರ ಗೇಟ್ ಬಳಿ ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟು, ಮಗು ಮತ್ತು ಗಂಡನಿಗೆ ತೀವ್ರ ಗಾಯಗಳಾಗಿವೆ.

ಗುಂಡ್ಲುಪೇಟೆಯಿಂದ ಕೇರಳಕ್ಕೆ ಎಂಸೆಂಡ್ ತುಂಬಿಸಿಕೊಂಡು ಹೋಗುತ್ತಿದ್ದ ಕರ್ನಾಟಕದ ಕೆಎಲ್‌47 ಎಂ 3272 ಸಂಖ್ಯೆಯ ಟಿಪ್ಪರ್, ಕೇರಳದ ಕ್ಯಾಲಿಕಟ್ ಕಡೆಯಿಂದ ಬರುತ್ತಿದ್ದ 23 ಬಿಹೆಚ್‌ 9341 ಕೆ ಸಂಖ್ಯೆಯ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ ನಿಶಾ ನೂರಿ (37) ಮತ್ತು ಅವರ ಮಗಳು ನೂಹ (18) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಡ ಮಹಮ್ಮದ್ ಅಜೀರ್ (41) ಮತ್ತು ಮಗ ನಹಿಯಾನ್ (9) ತೀವ್ರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ.

ಪಟ್ಟಣದಲ್ಲಿ ಟಿಪ್ಪರ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ವಿಶೇಷವಾಗಿ ಕೇರಳದ ನಂಬರ್ ಪ್ಲೇಟ್‌ಗಳ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿರುವುದರಿಂದ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಪುನರಾವರ್ತನೆಯಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಟಿಪ್ಪರ್‌ಗಳ ಮೇಲೆ ಕಟ್ಟುನಿಟ್ಟಾದ ನಿಯಂತ್ರಣ ಹೇರಲು ಜಿಲ್ಲಾಧಿಕಾರಿ, ಆರ್‌ಟಿಒ ಮತ್ತು ಸ್ಥಳೀಯ ಶಾಸಕರು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟಿಪ್ಪರ್ ಅನ್ನು ವಶಪಡಿಸಿಕೊಂಡಿದ್ದಾರೆ. ಮೃತದೇಹಗಳನ್ನು ಪಟ್ಟಣದ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಟುಂಬಸ್ಥರು ಬಂದ ನಂತರ ದೂರು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

3 mins ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

4 hours ago