Mysore
21
clear sky

Social Media

ಬುಧವಾರ, 28 ಜನವರಿ 2026
Light
Dark

ಕೊಳ್ಳೇಗಾಲ| ಐವರ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನ ಬಂಧನ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ಹೊಗೇನಕಲ್‌ ಜಲಪಾತಕ್ಕೆ ಹೋಗಲು ಐವರು ಸ್ನೇಹಿತರು ಪ್ಲಾನ್‌ ಮಾಡಿದ್ದರು.

ಈ ವೇಳೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಸಮೀಪ ಕಾರು ಹಾಗೂ ಟಿಪ್ಪರ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಘಟನೆ ನಡೆಯುತ್ತಿದ್ದಂತೆ ಟಿಪ್ಪರ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಇಂದು ಟಿಪ್ಪರ್‌ ಚಾಲಕನನ್ನು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭುವನಹಳ್ಳಿಯ ಮಂಜುನಾಥ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

Tags:
error: Content is protected !!