ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ಹೊಗೇನಕಲ್ ಜಲಪಾತಕ್ಕೆ ಹೋಗಲು ಐವರು ಸ್ನೇಹಿತರು ಪ್ಲಾನ್ ಮಾಡಿದ್ದರು.
ಈ ವೇಳೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಸಮೀಪ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಇಂದು ಟಿಪ್ಪರ್ ಚಾಲಕನನ್ನು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭುವನಹಳ್ಳಿಯ ಮಂಜುನಾಥ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…