ಹನೂರು: ಪಟ್ಟಣದ ಹೊರವಲಯದ ಪೊಲೀಸ್ ವಸತಿಗೃಹದ ಸಮೀಪ ಟಿಪ್ಪರ್ ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ( ಅಕ್ಟೋಬರ್ 22 ) ಬೆಳಿಗ್ಗೆ ಜರುಗಿದೆ.
ಚಾಮರಾಜನಗರದಿಂದ ಎಂ ಸ್ಯಾಂಡ್ ತುಂಬಿಕೊಂಡು ಕೊಳ್ಳೇಗಾಲ ಮಾರ್ಗವಾಗಿ ಹನೂರು ಪಟ್ಟಣಕ್ಕೆ ಟಿಪ್ಪರ್ ವಾಹನ ವೇಗವಾಗಿ ಬರುತ್ತಿದ್ದ ವೇಳೆ ಹನೂರು ಪಟ್ಟಣದ ಪೊಲೀಸ್ ವಸತಿಗೃಹ ಮುಂಭಾಗ ಕಾಡು ಹಂದಿಗಳ ಹಿಂಡು ಏಕಾಏಕಿ ರಸ್ತೆಗೆ ಧಾವಿಸಿದೆ. ಹಂದಿಗೆ ಡಿಕ್ಕಿ ಹೊಡೆಯವುದನ್ನು ತಪ್ಪಿಸಲು ಬಲಭಾಗಕ್ಕೆ ತಿರುಗಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಹಲವು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಟಿಪ್ಪರ್ ಪಲ್ಟಿಯಾಗಿದೆ. ಚಾಲಕ ಚೆಲುವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…