ಚಾಮರಾಜನಗರ

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್ ಟಿಓ ಇಲಾಖೆ ಹಾಗೂ ಗಣಿ ಇಲಾಖೆ ಬ್ರೇಕ್ ಹಾಕಬೇಕು ಎಂದು‌ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಿಪ್ಪರ್ ಗಳು ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲಿಕರಣ ನಡೆಯುತಿದ್ದರು ಅತಿ ವೇಗವಾಗಿ ಹಾಗೂ ಅಧಿಕ ಭಾರ ಹೊತ್ತು ಸಾಗುತ್ತಿದ್ದು ಇದಕ್ಕೆ ಪೊಲೀಸರು ಹಾಗೂ ಆರ್ ಟಿಓ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದು ತಾಲ್ಲೂಕು ವೀರಶೈವ ಮಹಾಸಭೆ ನಿರ್ದೇಶಕ ನಂದೀಶ್ ಹಂಗಳ ಒತ್ತಾಯಿಸಿದರು.

ಒಂದು ಟಿಪ್ಪರ್‌ ಪರ್ಮಿಟ್ ಪಡೆದು ಹತ್ತಾರು ಟಿಪ್ಪರ್ ಗಳು ಸಂಚಾರ ನಡೆಸಿ‌ ಸರ್ಕಾರಕ್ಕೆ ರಾಜಧನ ವಂಚಿಸುತಿದ್ದು ಕೆಲವು ಕಡೆ ಅಕ್ರಮವಾಗಿ ಗಣಿಗಾರಿಕೆ ನಡೆಯುತಿದ್ದರೂ ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆ ಇದ್ಯಾವುದನ್ನು ಪರಿಶೀಲನೆ ನಡೆಸುತಿಲ್ಲ ಎಂದು ಆರೋಪಿಸಿದರು.

ಅಧಿಕ ಬಿಳಿಕಲ್ಲು ಸಾಗಾಣೆ ವೇಳೆ ಪಕ್ಕದಲ್ಲಿ‌ಸಂಚರಿಸುವ ಬೈಕ್ ಮತ್ತಿತರ ವಾಹನದ ಮೇಲೆ ಕಲ್ಲು ಬಿದ್ದು ಪ್ರಾಣಹಾನಿ‌ ಸಂಭವಿಸಿದರೆ ಯಾರು ಹೊಣೆ? ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

11 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

17 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

17 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

19 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

19 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

20 mins ago