ಚಾಮರಾಜನಗರ

ಇಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸ: ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ

ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕದ ಉದ್ಘಾಟನೆ ನೆರವೇರಿಸಲಿದ್ದಾರೆ.

ಆ ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಪ್ರದೇಶದಲ್ಲಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಭರಚುಕ್ಕಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ.

ಇನ್ನು ಈ ಬಾರಿ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಲಪಾತೋತ್ಸವ ಆಯೋಜನೆ ಮಾಡಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅದ್ಧೂರಿ  ಚಾಲನೆ ನೀಡಲಿದ್ದಾರೆ.

ಭರಚುಕ್ಕಿ ಜಲಪಾತೋತ್ಸವದಲ್ಲಿ ಸಚಿವರಾದ ಎಚ್‌.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್‌, ಕೆ.ವೆಂಕಟೇಶ್‌ ಸೇರಿದಂತೆ ಹಲವು ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ.

ಇನ್ನು ಭರಚುಕ್ಕಿ ಪ್ರದೇಶದಲ್ಲೂ ಅಂತಿಮ ಸಿದ್ಧತಾ ಕಾರ್ಯ ನಡೆದಿದ್ದು, ಸಂಜೆ ಕಾರ್ಯಕ್ರಮವಾದ್ದರಿಂದ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇಂದಿನ ಕಾರ್ಯಕ್ರಮದಲ್ಲಿ ಹಲವು ಪ್ರವಾಸಿಗರು ಭರಚುಕ್ಕಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

1 hour ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

2 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

3 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

9 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

9 hours ago