ಚಾಮರಾಜನಗರ

ಮಾದಪ್ಪನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 63 ಜೋಡಿಗಳು

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಈ ಜೋಡಿಗಳು ಸತಿ-ಪತಿಗಳಾದರು.

ಸುತ್ತೂರು ಶ್ರೀ, ಸಾಲೂರು ಮಠದ ಸ್ವಾಮೀಜಿ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ದಂಪತಿಗಳಿಗೆ ಮಾಂಗಲ್ಯ ವಿತರಿಸಿ ಶುಭ ಹಾರೈಸಿದರು.

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿದ್ದು, ಮಾದಪ್ಪನ ಸನ್ನಿಧಿಯಲ್ಲಿ ಸತಿಪತಿಗಳಾಗುವುದು ಪುಣ್ಯವೆಂದೇ ಸಾರ್ವಜನಿಕರ ನಂಬಿಕೆಯಾಗಿದೆ.

ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವಜೋಡಿಗಳಿಗೆ ಮಾಂಗಲ್ಯ, ರೇಷ್ಮೆ ಸೀರೆ, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಪ್ರಾಧಿಕಾರ ನೀಡಿದೆ.

ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಭಾಗಿಯಾಗಿದ್ದರು. ಆದರೆ ಈ ಬಾರಿ ಸಿದ್ದರಾಮಯ್ಯ ಬರುತ್ತಾರೆ ಎನ್ನಲಾಗುತ್ತಿದ್ದರೂ ಕೊನೆಯ ದಿನಗಳಲ್ಲಿ ಅವರು ಬರುವುದು ರದ್ದಾಯಿತು. ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಕೂಡ ಗಜಪಯಣ ಕಾರ್ಯಕ್ರಮದಲ್ಲಿ ಭಾಗಿಯಾದ್ದರಿಂದ ಸಾಮೂಹಿಕ ವಿವಾಹಕ್ಕೆ ಗೈರಾದರು.

ಈ ಹಿನ್ನೆಲೆಯಲ್ಲಿ ಹನೂರು ಶಾಸಕ ಎಂ.ಆರ್.ಮಂಜುನಾಥ್‌, ಕಾಡಾ ಅಧ್ಯಕ್ಷ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

15 mins ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

43 mins ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

1 hour ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

2 hours ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

2 hours ago