ಚಾಮರಾಜನಗರ

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ಮೈಸೂರು, ಗುಂಡ್ಲುಪೇಟೆ, ತೆರಕಣಾಂಬಿ ಮಾರುಕಟ್ಟೆಗೆ ಹೋಲಿಸಿದರೆ ಚಿಕ್ಕಹೊಳೆಯಲ್ಲಿ ಟೊಮೆಟೊ ಬೆಲೆಯನ್ನು ತೀವ್ರ ಇಳಿಸಲಾಗಿದೆ. 5ರಿಂದ 6 ರೂ.ವರೆಗೆ ದರ ಇಳಿಕೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮೂಹಿಕ ನಾಯಕತ್ವದ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಮಾತನಾಡಿ ,ಯಾವ ಮಾನದಂಡದ ಮೇಲೆ ಟೊಮೆಟೊ ಬೆಲೆಯನ್ನು ನಿಗದಿಪಡಿಸಲಾಗಿದೆ. ಬೆಲೆ ದಿಢೀರ್ ಕುಸಿಯಲು ಕಾರಣ ಯಾರು? ನೆರೆಯ ಮೈಸೂರು, ಜಿಲ್ಲೆಗೊಂದು ದರ, ಚಾಮರಾಜನಗರ ಜಿಲ್ಲೆಗೊಂದು ದರ ನಿಗದಿ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.

ರೈತರ ನೆರವಿಗೆ ಧಾವಿಸಬೇಕಾಗಿರುವ ಎಪಿಎಂಸಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದು ಖಂಡನೀಯ. ರೈತರಿಂದ ಶೇ 10 ಕಮಿಷನ್ ವಸೂಲಿ ಮಾಡುತ್ತಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ತಡೆಯಬೇಕು, ರೈತರಿಗೆ ನ್ಯಾಯಯುತ ಬೆಲೆ ಕೊಡಿಸಬೇಕು ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್, ಮಾ 16ರಂದು ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರೈತರು ಹಾಗೂ ಕಮಿಷನ್ ಏಜೆಂಟರ್ ಸಭೆ ನಡೆಯಲಿದ್ದು ಎಲ್ಲರೂ ಭಾಗವಹಿಸಬೇಕು ಎಂದರು. ಜಿಲ್ಲಾಧಿಕಾರಿ ಸಭೆಯ ಬಳಿಕ ರೈತರೇ ಇಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ತೀರ್ಮಾನ ಮಾಡಿರುವುದಾಗಿ ಹೊನ್ನೂರು ಪ್ರಕಾಶ್ ಹೇಳಿದರು.

ಮುಖಂಡರಾದ ಅರಕಲವಾಡಿ ಮಹೇಶ್, ಕಿರಣ್ ಕೊತ್ತಲವಾಡಿ, ಮಂಜು, ಪುಣಜೂರು ಚಂದ್ರು, ರಂಗನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

45 mins ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

1 hour ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

2 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

2 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

2 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

3 hours ago