Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ನಾಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ.

ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಈ ಬಾರಿಯೂ ಸಾಮೂಹಿಕ ವಿವಾಹ ನೆರವೇರಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹಕ್ಕೆ ಬರುವ ವಧು ಹಾಗೂ ವರನ ಕಡೆಯವರಿಗೆ ಶ್ರೀ ಕ್ಷೇತ್ರದ ಪ್ರಾಧಿಕಾರ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ಈ ಬಾರಿ 63 ಜೋಡಿಗಳು ಅಂತಿಮವಾಗಿ ನೋಂದಣಿ ಮಾಡಿಕೊಂಡಿದ್ದು, ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ವಧುವಿಗೆ ನಾಲ್ಕು ಗ್ರಾಂ ಚಿನ್ನದ ತಾಳಿ, ಸೀರೆ, ಕಾಲುಂಗುರ, ವರನಿಗೆ ಶರ್ಟ್‌, ಶಲ್ಯ ವಿತರಣೆ ಮಾಡಲಾಗುತ್ತದೆ. ನಾಳೆ 63 ಜೋಡಿಗಳು ಮಾದಪ್ಪನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಲಿದ್ದು, ಎಲ್ಲರಿಗೂ ಕೂಡ ಬೆಟ್ಟದ ಪ್ರಾಧಿಕಾರದ ವತಿಯಿಂದ ಭೋಜನದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

 

 

 

Tags:
error: Content is protected !!