ಚಾಮರಾಜನಗರ

ನಾಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ.

ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಈ ಬಾರಿಯೂ ಸಾಮೂಹಿಕ ವಿವಾಹ ನೆರವೇರಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಮೂಹಿಕ ವಿವಾಹಕ್ಕೆ ಬರುವ ವಧು ಹಾಗೂ ವರನ ಕಡೆಯವರಿಗೆ ಶ್ರೀ ಕ್ಷೇತ್ರದ ಪ್ರಾಧಿಕಾರ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ಈ ಬಾರಿ 63 ಜೋಡಿಗಳು ಅಂತಿಮವಾಗಿ ನೋಂದಣಿ ಮಾಡಿಕೊಂಡಿದ್ದು, ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ವಧುವಿಗೆ ನಾಲ್ಕು ಗ್ರಾಂ ಚಿನ್ನದ ತಾಳಿ, ಸೀರೆ, ಕಾಲುಂಗುರ, ವರನಿಗೆ ಶರ್ಟ್‌, ಶಲ್ಯ ವಿತರಣೆ ಮಾಡಲಾಗುತ್ತದೆ. ನಾಳೆ 63 ಜೋಡಿಗಳು ಮಾದಪ್ಪನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಲಿದ್ದು, ಎಲ್ಲರಿಗೂ ಕೂಡ ಬೆಟ್ಟದ ಪ್ರಾಧಿಕಾರದ ವತಿಯಿಂದ ಭೋಜನದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

12 mins ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

16 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

26 mins ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

39 mins ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

4 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

4 hours ago