ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿಯ ತಡೆಗೋಡೆ ಕುಸಿದಿರುವ ಕಾರಣ ದುರಸ್ತಿ ಹಿನ್ನೆಲೆಯಲ್ಲಿ ಜು. 29 ಮತ್ತು 30ರಂದು ಬೆಟ್ಟದ ಎರಡು ದಿನಗಳ ಕಾಲ ದೇವಾಲಯ ತೆರೆಯುವುದಿಲ್ಲ.
ಅಲ್ಲದೇ, ಸದರಿ ದಿನಗಳಂದು ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಹೊಂಡರಬಾಳು : ವಾಹನ ಸಂಚಾರವೂ ನಿಷೇಧ
ಚಾಮರಾಜನಗರ ತಾಲ್ಲೂಕಿನ ಹೊಂಡರಬಾಳಿನಲ್ಲಿರುವ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಿಂದ ಕೆ. ಗುಡಿ ವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾಮಗಾರಿ ಹಿನ್ನೆಲೆಯಲ್ಲಿ ಚಾ.ನಗರದಿಂದ ಬಿಳಿಗಿರಿರಂಗನಬೆಟ್ಟಕ್ಕೆ ಕೆ.ಗುಡಿ ಮಾರ್ಗ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಸೋಮವಾರ ದಿಂದ ಸೆ.27ರ ತನಕ
ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.





