ಜಿಲ್ಲಾಧಿಕಾರಿ ಆದೇಶ ಮೀರಿ ಶಾಲೆ ಸಮಯದಲ್ಲಿ ಸಂಚಾರ: 6 ಟಿಪ್ಪರ್ ವಶ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ ಟಿಪ್ಪರ್‌ಗಳು ಶಾಲೆಗಳ ಆರಂಭ ಮತ್ತು ಬಿಡುವ ಸಮಯದಲ್ಲಿ ಶಾಲೆಗಳ ಪರಿಮಿತಿ 200 ಮೀ. ಒಳಗೆ ಸಂಚರಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.

ಆದೇಶ ಉಲ್ಲಂಘಿಸಿದಲ್ಲಿ ಅಂತಹ ವಾಹನಗಳು ಮತ್ತು ಚಾಲಕರುಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲೆಯ ಎಸ್‌ಪಿ ಎಚ್ಚರಿಕೆ ನೀಡಿದ್ದರು. ಆದರೆ, ಈ ಆದೇಶವನ್ನು ಉಲ್ಲಂಘಿಸಿದ 6 ಟಿಪ್ಪರ್ ಲಾರಿಗಳನ್ನು ಗುಂಡ್ಲುಪೇಟೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಗುಂಡ್ಲುಪೇಟೆ ಠಾಣೆಯ ಆರಕ್ಷಕ ನಿರೀಕ್ಷಕರಾದ ಎನ್.ಜಯಕುಮಾರ್ ಬೆಳಿಗ್ಗೆ 8.30ರಲ್ಲಿ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ಇರುವ ದೊಡ್ಡುಂಡಿ ಭೋಗಪ್ಪ, ಶ್ರೀ ಮದ್ದಾನೇಶ್ವರ ಹಾಗೂ ಪದವಿ ಶಿಕ್ಷಣ ಕಾಲೇಜುಗಳ ಮಾರ್ಗವಾಗಿ ಮೈಸೂರು ಕಡೆಗೆ ಹೋಗುತ್ತಿದ್ದ 6 ಟಿಪ್ಪರ್ ಲಾರಿಗಳನ್ನು ಮತ್ತು ಚಾಲಕರನ್ನು ವಶಕ್ಕೆ ಪಡೆದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago