ಕೊಳ್ಳೇಗಾಲ: ನಗರದ ಲಿಂಗಣಾಪುರ ಬಡಾವಣೆ ನಿವಾಸಿ ನಂದೀಶ್ ಸಾವು ಸಹಜವಲ್ಲ ಅದು ಕೊಲೆ ಎಂದು ಆರೋಪಿಸಿರುವ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಮಹದೇವ ಪ್ರಸಾದ್ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೊಳ್ಳೇಗಾಲದಲ್ಲಿ ಸರ್ವ ಸಮುದಾಯದ ಜನರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಹೀಗಿರುವಾಗ ಕೊಲೆ ಮಾಡಿ ಜಾತಿ ಜಾತಿಗಳ ನಡುವೆ ಸಂಘರ್ಷವಾಗುವಂತಹ ವಾತಾವರಣ ಸೃಷ್ಟಿ ಮಾಡಿರುವ ಆರೋಪಿಗಳಾದ ನಿತಿನ್, ಅಕ್ಷಯ್, ಕೌಶಿಕ್ ಹಾಗೂ ಅನುಷಾ ಎಂಬ ನಾಲ್ವರ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕು. ಈ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಅಂತ ಒತ್ತಾಯಿಸಿದರು.
ಇನ್ನು ಈ ಪ್ರಕರಣದಲ್ಲಿ ಪೋಲಿಸರು ಸರಿಯಾದ ತನಿಖೆ ಮಾಡಿ ನ್ಯಾಯ ದೊರಕಿಸಿಕೊಡುತ್ತಾರೆಂಬ ನಂಬಿಕೆ ಇಲ್ಲದಾಗಿದ್ದು ನಂದೀಶ್ ಸಾವಿನ ಪ್ರಕರಣವನ್ನು ಸಿ.ಓ ಡಿ ತನಿಖೆಗೆ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷ ಪುಟ್ಟಣ್ಣ ಪ್ರಧಾನ ಕಾರ್ಯದರ್ಶಿ ಬಸವರಾಜು. ಸಂಚಾಲಕ ಇಂದ್ರೇಶ್ . ಚಾಮುಲ್ ನಿರ್ದೇಶಕ ಮಧುವನಹಳ್ಳಿ ನಂಜುಂಡಸ್ವಾಮಿ. ವೀರಶೈವ ಮುಖಂಡರಾದ ಮಹೇಶ್ ರುದ್ರಸ್ವಾಮಿ ಪ್ರದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…