ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.
ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…