ಚಾಮರಾಜನಗರ

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದರೂ ಕಳೆದ ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.

ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ.ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದಾರೆ. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆನೆಗೆ ಇಷ್ಟವಾದ ಕಬ್ಬು, ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದೆ. ಆದರೂ ಅಸ್ವಸ್ಥಗೊಂಡಿರುವ ಆನೆ ಮಾತ್ರ ಮೇಲೆಳುತ್ತಿಲ್ಲ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ರಕ್ಷಣೆ ಮಾಡಲು ಇನ್ನಿಲ್ಲದ ಪ್ರಯತ್ನ ಮುಂದುವರೆಸಿದ್ದಾರೆ.

ನೆರಳಿನ ವ್ಯವಸ್ಥೆ: ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಅಸ್ವಸ್ಥಗೊಂಡಿರುವ ಆನೆಗೆ ತೊಂದರೆಯಾಗದಂತೆ ಶಾಮಿಯಾನದ ವ್ಯವಸ್ಥೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಜಿತೇಂದ್ರ, ಉಪ ವಲಯ ಅರಣ್ಯ ಅಧಿಕಾರಿಗಳಾದ ವಿನಾಯಕ, ದಿನೇಶ್, ಅರಣ್ಯ ರಕ್ಷಕರಾದ ಸುರೇಶ್, ಚಿನ್ನಸ್ವಾಮಿ, ಭೀಮಪ್ಪ, ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

21 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

21 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

21 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

21 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

21 hours ago