Mysore
29
moderate rain

Social Media

ಶನಿವಾರ, 24 ಅಕ್ಟೋಬರ್ 2026
Light
Dark

ಕಾಡಾನೆ ದಾಳಿಗೆ ಎರಡು ಎಕರೆ ಬೀಟ್ರೋಟ್ ಬೆಳೆ ನಾಶ: ಸಂಕಷ್ಟದಲ್ಲಿ ಆಲತ್ತೂರು ರೈತ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್ ಬೆಳೆ ನಾಶವಾಗಿದೆ. ರೈತ ಚಂದ್ರಕುಮಾರ್ ಅವರ ಸರ್ವೆ ನಂಬರ್‌ 154ರ ಜಮೀನಿಗೆ ನುಗ್ಗಿದ ಕಾಡಾನೆಗಳು, ಬೆಳೆಯನ್ನು ತುಳಿದು ತಿಂದು ಹಾನಿಪಡಿಸಿವೆ.

ಕಷ್ಟಪಟ್ಟು ಬೆಳೆದ ಫಸಲು ಕಳೆದುಕೊಂಡ ರೈತ ಚಂದ್ರಕುಮಾರ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡು ಎಕರೆಯ ಬೀಟ್ರೋಟ್ ಬೆಳೆಯಿಂದ ಸುಮಾರು ಎರಡೂವರೆ ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಿದ್ದೆವು. ಆದರೆ ಕಾಡಾನೆಗಳ ದಾಳಿಯಿಂದ ಭಾರೀ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಹಿಂದೆಯೂ ಕಾಡಾನೆಗಳಿಂದ ಬೆಳೆ ಹಾನಿಯಾಗಿದ್ದು, ಆನೆಗಳ ನಿಯಂತ್ರಣದಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಸೂಕ್ತ ಪರಿಹಾರವೂ ದೊರೆಯುತ್ತಿಲ್ಲ ಎಂದು ರೈತ ಆರೋಪಿಸಿದ್ದಾರೆ. ರೈತರ ಕಷ್ಟಕ್ಕೆ ಸ್ಪಂದಿಸಿ, ನಷ್ಟಕ್ಕೆ ತಕ್ಕ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಓಂಕಾರ್ ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಸಂಕಷ್ಟದಲ್ಲಿರುವ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರೂ ಆಗ್ರಹಿಸಿದ್ದಾರೆ.

 

Tags:
error: Content is protected !!