ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ.
ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು.
ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ ತೆರಕಣಾಂಬಿ ಠಾಣೆಯಲ್ಲಿ ಸೇವೆ ಸಲ್ಲಿಸಿ ದೊಡ್ಡರಾಯಪೇಟೆ ಮಹದೇವಸ್ವಾಮಿ ಅವರೂ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ ನಗರಕ್ಕೆ ಬರುತ್ತಿದ್ದರು. ಭಾನುವಾರ ರಾತ್ರಿ ೭.೪೫ರಲ್ಲಿ ಎದುರುಗಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಉಡಿಗಾಲ ಪ್ರವೇಶದ್ವಾರದಲ್ಲಿ ಗುದ್ದಿದೆ. ಪರಿಣಾಮವಾಗಿ ಮಲ್ಲಿಕಾರ್ಜುನಸ್ವಾಮಿ ಅವರ ಭುಜ ಇನ್ನಿತರ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಮಹದೇವಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…