ಚಾಮರಾಜನಗರ: ಬಿಳಿಗಿರಿರಂಗಬೆಟ್ಟ ಹುಲಿ ಸಂರಕ್ಷಿತಾರಣ್ಯದ ಯಳಂದೂರು ವಲಯದ ಪುರಾಣಿ ಶಾಖೆಯಲ್ಲಿ ಗಂಡಾನೆಗಳ ಕಳೇಬರ ಪತ್ತೆಯಾಗಿದೆ.
ಬಿಆರ್‌ಟಿ (ಬಿಳಿಗಿರಿ ರಂಗನ ಬೆಟ್ಟ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಯಳಂದೂರು ವಲಯದಲ್ಲಿ ಒಂದು ಆನೆ ಕಳೇಬರ ಪತ್ತೆಯಾದರೇ, ಬೈಲೂರು ವಲಯದಲ್ಲಿ ಮತ್ತೊಂದು ಆನೆ ಕಳೇಬರ ಪತ್ತೆಯಾಗಿರುವುದು ವರದಿಯಾಗಿದೆ.
ಇತ್ತೀಚೆಗೆ ಬೇತಾಳಕಟ್ಟೆ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಆಳಶೆಟ್ಟಿ ಮೂಲೆಯಲ್ಲಿ 40 ವರ್ಷ ವಯಸ್ಸಿನ ಗಂಡಾನೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರೇಲಾಲ್, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕ ಶ್ರೀಪತಿ ಹಾಗೂ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೈಲೂರು ರೇಂಜಿನಲ್ಲಿ ಮೃತಪಟ್ಟಿರುವ ಆನೆ ಸುಮಾರು 8 ತಿಂಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಕಳೆದ 20 ದಿನಗಳ ಹಿಂದೆ ಸ್ವಾಭಾವಿಕವಾಗಿ ಆನೆ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು 2 ದಂತಗಳು ಸುರಕ್ಷಿತವಾಗಿವೆ. ಎಸಿಎಫ್ ಕೆ.ಸುರೇಶ್, ಆರ್‌ಎಫ್‌ಒ ನಾಗೇಂದ್ರ ನಾಯಕ ಅವರ ಸಮ್ಮುಖದಲ್ಲಿ ಪಶು ವೈದ್ಯರಾದ ಡಾ.ವಾಸಿಂ ಮಿರ್ಜಾ ಮರಣೋತ್ತರ ಪರೀಕ್ಷೆ ನಡೆಸಿದರು. 2 ದಂತಗಳನ್ನು ಇಲಾಖೆಯ ವಶಕ್ಕೆ ಪಡೆಯಲಾಯಿತು.
ಇನ್ನು ಆನೆಗಳು ಸುಮಾರು ತಿಂಗಳುಗಳ ಹಿಂದೆಯೇ ಸತ್ತು ಹೋಗಿರುವುದು ಕಂಡುಬಂದಿದ್ದು, ಕಳೇಬರ ಪತ್ತೆಯಾಗುವ ವರೆಗೂ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…