Mysore
32
scattered clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದಲ್ಲಿ ಎಂದಿನಂತೆ 4 ಕಾಡಾನೆಗಳು ನೀರು ಕುಡಿಯಲು ಹೋಗಿದೆ. ನಾಲ್ಕು ಆನೆಗಳ ಪೈಕಿ ಮೂರು ಆನೆಗಳು ಕೆಸರಿನಲ್ಲಿ ಸಿಲುಕಿಕೊಂಡು ಘೀಳಿಡುತ್ತಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿಗಳು ಗಮನಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಭಾಸ್ಕರ್, ಎಸಿಎಪ್ ವಿರಾಜ್ ಹೊಸೂರ್, ವಲಯ ಅರಣ್ಯ ಅಧಿಕಾರಿ ಜಿತೇಂದ್ರ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ ವರ್ಗದವರು ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನು ರಕ್ಷಣೆ ಮಾಡಿದ್ದಾರೆ.

ಆನೆಗಳು ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಮೇವಿಲ್ಲದೆ ನಿತ್ರಾಣಗೊಂಡಿದ್ದವು, ಪಶು ವೈದ್ಯಾಧಿಕಾರಿಗಳು ಆನೆಗಳಿಗೆ ಚಿಕಿತ್ಸೆ ನೀಡುವ ಮೂಲಕ ರಕ್ಷಣೆ ಮಾಡಿದ್ದಾರೆ ಆನೆಗಳು ಚೇತರಿಸಿಕೊಳ್ಳುತ್ತೀವೆ ಎಂದು ತಿಳಿದು ಬಂದಿದೆ.

ಆನೆಗಳ ರಕ್ಷಣೆ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

 

Tags:
error: Content is protected !!