ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ ಸಂಜೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ನೆರವೇರಿತು.

ಯುಗಾದಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಹಣ್ಣು, ತರಕಾರಿ, ಫಲ, ಪುಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ಜತೆಗೆ ದೇಗುಲದ ಸುತ್ತಲು ವಿವಿಧ ಹೂಗಳಿಂದ ಸಿಂಗಾರ ಮಾಡಲಾಗಿತ್ತು.

ಮಂಗಳವಾರ ಬೆಳಿಗ್ಗೆ ಸ್ವಾಮಿಗೆ ಹಾಲು ಮೊಸರು ಎಳನೀರು ಹಾಗೂ ಇನ್ನಿತರ ಅದ್ರ ಮೇಲೆ ಅಭಿಷೇಕ ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸಲಾಯಿತು. ದೇಗುಲದಿಂದ ಆಗಮಿಸಿದ ಪೇಡಕಂಪನ ಅರ್ಚಕರು ಭಕ್ತರ ಸಮ್ಮುಖದಲ್ಲಿ ಸತ್ತಿಗೆ ಸೂರಿಪಾನಿ ಮತ್ತು ವಾದ್ಯ ಮೇಳಗಳೊಂದಿಗೆ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ಮಾದಪ್ಪನ ಸನ್ನಿಧಿಗೆ ತೆರೆದುಯಲಾಯಿತು , ಬಳಿಕ ಮಹಾ ಮಂಗಳಾರತಿ ಬೆಳಗಿಸಿ ಬರಮಾಡಿಕೊಳ್ಳಲಾಯಿತು.

ಉತ್ಸವಮೂರ್ತಿಯನ್ನು ಮೆರವಣಿಗೆಯ ಮೂಲಕ ಮಾದಪ್ರದ ಸನ್ನಿಧಿಗೆ ಕರೆದೊಯ್ದ ಲಾಯಿತು. ಬಳಿಕ ಮಹಾ ಮಂಗಳಾರತಿ ಬೆಳಗಿಸಿ ಬರಮಾಡಿಕೊಳ್ಳಲಾಯಿತು.

ಮಾರ್ಚ್ 18ರಂದು ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಸೇವೆ ಹಾಗೂ ಉತ್ಸವದಿಗಳು ಜರುಗಲಿದೆ ಮಾರ್ಚ್ 19 ರಂದು ಯುಗಾದಿ ಅಮಾವಾಸ್ಯೆ ಮಹಾ ರಥೋತ್ಸವ ಬೆಳಗ್ಗೆ 9:45 ರಿಂದ 11 ಗಂಟೆಯವರೆಗೆ ಜರುಗಲಿದೆ.

ಕಣ್ಮನ ಸೆಳೆಯುತ್ತಿದೆ ಹೂವಿನ ಅಲಂಕಾರ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ವಿವಿಧ ಫಲ ಪುಷ್ಪ, ಕಬ್ಬು, ಭತ್ತ ಹಣ್ಣು ತರಕಾರಿಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಈ ಬಾರಿ ದೇವಸ್ಥಾನದ ವತಿಯಿಂದ ಹೂವಿನ ಅಲಂಕಾರ ಮಾಡಲಾಗಿದ್ದು ಆನೇಕಲ್ ಗ್ರಾಮದ ಮಂಜು ಮತ್ತು ತಂಡದವರು ವಿಶೇಷ ಅಲಂಕಾರ ಮಾಡಿದ್ದಾರೆ. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮಾಡಿರುವುದರಿಂದ ಭಕ್ತಾದಿಗಳ ಕಣ್ಮನ ಸೆಳೆಯುತ್ತಿದೆ.

ಪ್ರಸಾದ ಪರಿಶೀಲನೆ ನಡೆಸಿದ ಕಾರ್ಯದರ್ಶಿ ರಘು
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ದಿನಗಳ ಕಾಲ ವರೆಗೆ ನಡೆಯಲಿರುವ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಲಿದ್ದಾರೆ ಮಂಗಳವಾರವು ಸಹ ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಲು ದಾಸೋಹ ಭವನಕ್ಕೆ ಭೇಟಿ ನೀಡಿದ್ದರು. ಮಂಗಳವಾರ ಭಕ್ತಾದಿಗಳಿಗೆ ಸಿದ್ಧಪಡಿಸಲಾಗಿದ್ದ ಪ್ರಸಾದವನ್ನು ಕಾರ್ಯದರ್ಶಿ ಎಈ ರಘು ಪರಿಶೀಲನೆ ನಡೆಸಿ ಖುದ್ದು ಪ್ರಸಾದ ಸೇವಿಸಿ, ಪ್ರತಿನಿತ್ಯದಂತೆ ಜಾತ್ರಾ ಮಹೋತ್ಸವದಲ್ಲಿಯೂ ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಕೆ ಮಾಡಿ ಪ್ರಸಾದ ನೀಡುವಂತೆ ಸೂಚನೆ ನೀಡಿದ್ದಾರೆ.

ಬೇವು ಬೆಲ್ಲ ವಿತರಣೆ
ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರು ಭಕ್ತರಿಗೆ ಬೇವು ಬೆಲ್ಲ ವಿತರಣೆ ಮಾಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

6 mins ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

19 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

25 mins ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

37 mins ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

42 mins ago

ಒಳಮೀಸಲಾತಿಯಲ್ಲಿ ಬಲಗೈಗೆ ಅನ್ಯಾಯ : ಮಾ.25ಕ್ಕೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…

49 mins ago