gundlupete
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ.
ಕಾಡಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ರಸ್ತೆ ಸಮೀಪವೇ ಫೋಟೋಶೂಟ್ ಮಾಡಿಸುತ್ತಿದ್ದ ಬೆಂಗಳೂರು ಮೂಲಕ ಯುವಕ ಹಾಗೂ ಯುವತಿಗೆ ಭಾರೀ ದಂಡ ವಿಧಿಸಲಾಗಿದೆ.
ಬಂಡೀಪುರದ ಮಂಗಲ ರಸ್ತೆ ಸಮೀಪ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರು ಕಾಡಿನೊಳಗೆ ಅತಿಕ್ರಮ ಪ್ರವೇಶಿಸಿ ಫೋಟೋಶೂಟ್ ಮಾಡಿಸಿದ್ದರು.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಪ್ರವಾಸಿಗರು, ಈ ವಿಡಿಯೋವನ್ನು ಬಂಡೀಪುರ ಎಸಿಎಫ್ ನವೀನ್ ಕುಮಾರ್ ಅವರಿಗೆ ಕಳುಹಿಸಿ ದೂರು ನೀಡಿದ್ದರು.
ಇದನ್ನೂ ಓದಿ:- ‘ಬುಲೆಟ್’ ಮೇಲೆ ಬಂದ ಧರ್ಮ ಕೀರ್ತಿರಾಜ್; ಜೂನ್ 20ಕ್ಕೆ ಚಿತ್ರ ಬಿಡುಗಡೆ
ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಲ್ಲವಿ ಮತ್ತು ಘೋಷ್ ಎಂಬುವವರನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿದ್ದಲ್ಲದೇ 25 ಸಾವಿರ ದಂಡ ಕಟ್ಟಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…