ಚಾಮರಾಜನಗರ: ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿ ಕಲಾ ಪ್ರದರ್ಶನಕ್ಕೆ ಯಾವುದೇ ಮೂಲಭೂತ ಸೌಕರ್ಯ ಇಲ್ಲ. ಮೇಲ್ನೋಟಕ್ಕೆ ಸುಂದರವಾಗಿ ಕಾಣುವ ರಂಗಮಂದಿರದಲ್ಲಿ ಸೌಲಭ್ಯಗಳಿಲ್ಲದೇ ಕಳೆಗುಂದಿದಂತೆ ಕಾಣುತ್ತಿದೆ.
ರಂಗಮಂದಿರಲ್ಲಿ ಪ್ರಮುಖವಾಗಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆ ಇರಬೇಕು. ಇದರ ಜೊತೆ ಜೊತೆಗೆ ಕುಡಿಯುವ ನೀರು, ಶೌಚಾಲಯ, ಭದ್ರತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳೂ ಇರಬೇಕು. ಆದರೆ ಇಲ್ಲಿ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ ಇಲ್ಲಿ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದ್ದು, ಭವನದ ಸ್ವಚ್ಛತೆಗೆ ಹಾಗೂ ಭದ್ರತೆಗೆ ಒಬ್ಬ ಸಿಬ್ಬಂದಿಯೂ ಇಲ್ಲ. ಪರಿಣಾಮ ಅಲ್ಲಲ್ಲಿ ಅನೈರ್ಮಲ್ಯ ಕಾಡುತ್ತಿದ್ದು, ರೋಗ ಹರಡುವ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಸಿಬ್ಬಂದಿಗಳನ್ನು ನೇಮಿಸಿ, ಇಲ್ಲಿ ಶುಚಿತ್ವ ಕಾಪಾಡಬೇಕು. ಬಳಿಕ ಕಲಾವಿದರಿಗೆ ಉತ್ತಮ ವೇದಿಕೆ ಸಿದ್ಧಗೊಳ್ಳಬೇಕು ಎಂದು ಕಲಾರಸಿಕರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…
ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…
ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…