Mysore
23
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಡಿ 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ೬೬ನೇ ಪರಿನಿಬ್ಬಾಣ ದಿನ ಅಂಗವಾಗಿ ಸ್ವಾತಂತ್ತ್ಯ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್, ಬಿಜೆಪಿ ದುರಾಡಳಿತದ ವಿರುದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಯೋಜಿಸಲಾಗಿದೆ. ಈ ಸಮಾವೇಶಕ್ಕೆ ಜಿಲ್ಲೆಯ ಹಳ್ಳಿಹಳ್ಳಿಯಿಂದಲ್ಲೂ ಭಾಗವಹಿಸುವ ಮೂಲಕ ಯಶ್ವಸಿಗೊಳಿಸಿಕೊಡುವಂತೆ ನಾಗರಾಜು ಮನವಿ ಮಾಡಿದರು.

ಈ ಸಮಾವೇಶಕ್ಕೆ ಜಿಲ್ಲೆಯಿಂದ ೨೦೦ಕ್ಕೂ ಹೆಚ್ಚು ಬಸ್‌ಗಳ ಮೂಲಕ ಭಾಗವಹಿಸುವ ಗುರಿಯಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಎಲ್ಲಾ ರಂಗಗಳಲ್ಲೂ ಅಧ:ಪತನದತ್ತ ಸಾಗುತ್ತಿದೆ. ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟಾಗಿದೆ. ನಿರುದ್ಯೋಗ ಸಮಸ್ಯೆ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ಕೋಮು ರಾಜಕೀಯ ವಿಜೃಂಭಿಸುತ್ತದೆ. ನ್ಯಾಯ ಕೇಳುವವರು ದೇಶದ್ರೋಹಿಗಳಾಗುತ್ತಿದ್ದಾರೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!