ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ೬೬ನೇ ಪರಿನಿಬ್ಬಾಣ ದಿನ ಅಂಗವಾಗಿ ಸ್ವಾತಂತ್ತ್ಯ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್, ಬಿಜೆಪಿ ದುರಾಡಳಿತದ ವಿರುದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಯೋಜಿಸಲಾಗಿದೆ. ಈ ಸಮಾವೇಶಕ್ಕೆ ಜಿಲ್ಲೆಯ ಹಳ್ಳಿಹಳ್ಳಿಯಿಂದಲ್ಲೂ ಭಾಗವಹಿಸುವ ಮೂಲಕ ಯಶ್ವಸಿಗೊಳಿಸಿಕೊಡುವಂತೆ ನಾಗರಾಜು ಮನವಿ ಮಾಡಿದರು.
ಈ ಸಮಾವೇಶಕ್ಕೆ ಜಿಲ್ಲೆಯಿಂದ ೨೦೦ಕ್ಕೂ ಹೆಚ್ಚು ಬಸ್‌ಗಳ ಮೂಲಕ ಭಾಗವಹಿಸುವ ಗುರಿಯಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಎಲ್ಲಾ ರಂಗಗಳಲ್ಲೂ ಅಧ:ಪತನದತ್ತ ಸಾಗುತ್ತಿದೆ. ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟಾಗಿದೆ. ನಿರುದ್ಯೋಗ ಸಮಸ್ಯೆ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ಕೋಮು ರಾಜಕೀಯ ವಿಜೃಂಭಿಸುತ್ತದೆ. ನ್ಯಾಯ ಕೇಳುವವರು ದೇಶದ್ರೋಹಿಗಳಾಗುತ್ತಿದ್ದಾರೆ ಎಂದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…