ಚಾಮರಾಜನಗರ

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ ಘಟನೆ ಅರಬಗೆರೆ ಗ್ರಾಮದಲ್ಲಿ ಜರುಗಿದೆ.

ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ವಿಲೇಜ್ ಗ್ರಾಮದ ಮುತ್ತುರಾಜು ಎಂಬುವರಿಗೆ ಸೇರಿದ 50 ಕುರಿಗಳನ್ನು ಅರಬಗೆರೆ ಗ್ರಾಮದಲ್ಲಿ ಗುತ್ತಿಗೆಗೆ ಮೇಯಿಸಲು ಬಿಟ್ಟಿದ್ದರು. ಸೋಮವಾರ ಮಧ್ಯಾಹ್ನ ಅರಬಗೆರೆ ಗ್ರಾಮದ ಬೂದಿಕೆರೆಯಲ್ಲಿ ನೀರಿಗೆ ಕಿಡಿಗೇಡಿಗಳು ಯೂರಿಯ ಬೆರೆಕೆ ಮಾಡಿದ್ದಾರೆ. ಮೇವು ಮೇಯ್ದು ದಾಹ ಇಂಗಿಸಿಕೊಳ್ಳಲು ಕೆರೆಗೆ ಹೋಗಿದ್ದ ಕುರಿಗಳು ವಿಷಪೂರಿತ ನೀರು ಕುಡಿದು ಏಳು ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಉಳಿದಂತೆ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.

ವಿಚಾರ ತಿಳಿಯುತ್ತಿದ್ದಂತೆ ಪಶುವೈದ್ಯಾಧಿಕಾರಿ ಡಾ. ಸಿದ್ದರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪರಿಹಾರಕ್ಕೆ ಆಗ್ರಹ
ಕಳೆದ ಹಲವಾರು ವರ್ಷಗಳಿಂದ ಕೌದಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇದರಿಂದ ವ್ಯವಸಾಯ ಮಾಡಲು ಸಾಧ್ಯವಾಗದೆ ರೈತರು ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದೀಗ ಕಿಡಿಗೇಡಿಗಳ ಕೃತ್ಯಕ್ಕೆ ರೈತ ಮುತ್ತುರಾಜ್ ಅವರಿಗೆ ಸೇರಿದ ಏಳು ಕುರಿಗಳು ಮೃತಪಟ್ಟಿದೆ. ರೈತನಿಗೆ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ನಷ್ಟ ಉಂಟಾಗಿದ್ದು ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago