ಚಾಮರಾಜನಗರ

ಚಾಮರಾಜನಗರ: ಐದು ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯೇ ಕಾರಣ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ.

ಈ ಬಗ್ಗೆ ಮಾತನಾಡಿರುವ ಸಿಸಿಎಫ್‌ ಹೀರಾಲಾಲ್‌ ಅವರು, ಹುಲಿ ಸಾಯಿಸಲು ಯಾವ ಕೀಟನಾಶಕ ಬಳಸಲಾಗಿದೆ ಎಂದು ತಿಳಿಯಲು ಪ್ರಯೋಗಾಲಯಕ್ಕೆ ಹುಲಿಯ ಅಂಗಾಂಗಗಳನ್ನು ರವಾನೆ ಮಾಡಲಾಗಿತ್ತು. ಇದೀಗ ಲ್ಯಾಬ್‌ ವರದಿ ಕೂಡ ಸಿಕ್ಕಿದ್ದು, ಕಾರ್ಬೋಫುರಾನ್‌ ಎಂಬ ಕೀಟನಾಶಕವನ್ನು ಹಸುವಿಗೆ ಸಿಂಪಡಿಸಿದ್ದಾರೆಂದು ಗೊತ್ತಾಗಿದೆ ಎಂದರು.

ಈ ಕೀಟನಾಶಕವು ವನ್ಯಪ್ರಾಣಿಗಳು, ಪಕ್ಷಿಗಳ ನರಮಂಡಲದ ಮೇಲೆ ತುಂಬಾನೇ ದುಷ್ಪರಿಣಾಮ ಬೀರುತ್ತವೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.

ಐದು ಹುಲಿಗಳು ಕೂಡ ವಿಷ ಪ್ರಾಶನದಿಂದಲೇ ಸಾವನ್ನಪ್ಪಿವೆ ಎಂಬುದು ಲ್ಯಾಬ್‌ ವರದಿಯಿಂದ ಗೊತ್ತಾಗಿದೆ. ಇನ್ನೆರಡು ದಿನಗಳಲ್ಲಿ ಉನ್ನತ ಮಟ್ಟದ ತನಿಖಾ ತಂಡ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಿದ್ದು, ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗವಾಗುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago