ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಭರವಸೆ ಈಡೇರಿಸಿಲ್ಲ. ಆದರೂ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ, ರಾಮಮಂದಿರ ಮಾಡುವುದು ಗ್ಯಾರಂಟೀನಾ? ಎಂದು ಪ್ರಶ್ನಿಸಿರುವ ಅವರು, ರಾಮಮಂದಿರ ನಿರ್ಮಾಣ ಮಾಡುವುದಕ್ಕಿಂತ ರಾಮರಾಜ್ಯವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.
ಸಮಾಜದಲ್ಲಿ ಸಮಾನತೆ ಆದಾಗ, ಹಸಿವು ಮುಕ್ತ ಹಾಗೂ ಯುವಕರಿಗೆ ಸರಿಯಾದ ಶಿಕ್ಷಣ, ಉದ್ಯೋಗ ಜೊತೆಗೆ ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ಮಾತ್ರ ರಾಮರಾಜ್ಯ ಆಗುತ್ತದೆ. ದೇವರು ಸಾಕ್ಷಾತ್ಕಾರ ಆಗಬೇಕಾದರೆ ದೊಡ್ಡ ದೊಡ್ಡ ಭವ್ಯವಾದ ದೇವಸ್ಥಾನ ಕಟ್ಟಬೇಕಿಲ್ಲ. ಸಾವಿರಾರು ವರ್ಷಗಳಿಂದ ಹಿಂದೂ ಧರ್ಮ ಇದೆ, ನೂರಾರು ದೇವಸ್ಥಾನಗಳಿವೆ. ಆದ್ರೆ, ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆ ಮಾತ್ರ ತೊಲಗಿಲ್ಲ ಎಂದು ಕಿಡಿಕಾರಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…