ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ಮಮ್ಮ ಎಸ್ ಅವರು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ತೀವ್ರ ಹೋರಾಟ ಮಾಡಿದ್ದಾರೆ.
ಖುದ್ದು ಬುಡಕಟ್ಟು ಪ್ರದೇಶಗಳಿಗೆ ಭೇಟಿ ನೀಡಿ ಸಮುದಾಯದ ಮನವೊಲಿಸಿ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡುವುದು ಇವರ ಪ್ರಮುಖ ಕೆಲಸವಾಗಿದೆ.
ಹಳ್ಳಿ ಹಳ್ಳಿಗಳಲ್ಲಿ ತೆರಳಿ ಸಮುದಾಯದ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಇವರ ಪ್ರಮುಖ ಸಾಧನೆಯಾಗಿತ್ತು.
ಇದರ ಜೊತೆಗೆ ಸಮುದಾಯದವರಿಗೆ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು. ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡುವುದು. ಸಮುದಾಯದ ಕಲೆ, ಕುಲ ಕಸುಬು, ಸಂಸ್ಕೃತಿಯನ್ನು ಸಂರಕ್ಷಿಸುವುದು ಹಾಗೂ ಪೋಷಿಸುವ ನಿಟ್ಟಿನಲ್ಲಿ ಇವರು ಅಪಾರ ಶ್ರಮ ವಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇವರ ಸೇವೆಯನ್ನು ಗುರುತಿಸಿದ ರಾಜ್ಯ ಸರ್ಕಾರ ರತ್ನಮ್ಮ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿದೆ.
ರತ್ನಮ್ಮರಿಗೆ 20 ಗ್ರಾಂ ಬಂಗಾರದ ಪದಕ ಹಾಗೂ ಐದು ಲಕ್ಷ ರೂ ನಗದು ನೀಡಿ ಗೌರವಿಸಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…