ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ.
ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, ಗ್ರಾಮಸ್ಥರು ಬೋರ್‌ವೆಲ್ ನೀರಿನ ಮೊರೆ ಹೋಗಿದ್ದಾರೆ.
ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಹುಲ್ಲಹಳ್ಳಿ ಶುದ್ದೀಕರಣ ಘಟಕದಿಂದ ಕುಡಿಯುವ ನೀರಿನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವುದರಿಂದ ಜಾಕ್‌ವೆಲ್ ಸಂಪೂರ್ಣ ಮುಳುಗಡೆಯಾಗಿದೆ.
ಆದ್ದರಿಂದ ಎಲ್ಲರೂ ಪರ್ಯಾಯವಾಗಿ ಬೋರ್‌ವೆಲ್‌ಗಳನ್ನು ಉಪಯೋಗಿಸಿಕೊಂಡು ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.