ಚಾಮರಾಜನಗರ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ.

ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, ಗ್ರಾಮಸ್ಥರು ಬೋರ್‌ವೆಲ್‌ ನೀರಿನ ಮೊರೆ ಹೋಗಿದ್ದಾರೆ.

ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಹುಲ್ಲಹಳ್ಳಿ ಶುದ್ದೀಕರಣ ಘಟಕದಿಂದ ಕುಡಿಯುವ ನೀರಿನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವುದರಿಂದ ಜಾಕ್‌ವೆಲ್‌ ಸಂಪೂರ್ಣ ಮುಳುಗಡೆಯಾಗಿದೆ.

ಆದ್ದರಿಂದ ಎಲ್ಲರೂ ಪರ್ಯಾಯವಾಗಿ ಬೋರ್‌ವೆಲ್‌ಗಳನ್ನು ಉಪಯೋಗಿಸಿಕೊಂಡು ಕುಡಿಯುವ ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

7 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

7 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

7 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

7 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

7 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

8 hours ago